Thursday, 19 April 2018

ಅಧ್ಯಾಯ – 01 : ಶ್ಲೋಕ – 44



ಉತ್ಸನ್ನಕುಲಧರ್ಮಾಣಾಂ ಮನುಷ್ಯಾಣಾಂ ಜನಾರ್ದನ  ।

ನರಕೇ ನಿಯತಂ ವಾಸೋ ಭವತೀತ್ಯನುಶುಶ್ರುಮ  ॥೪೪॥

ಉತ್ಸನ್ನ ಕುಲಧರ್ಮಾಣಾಮ್ ಮನುಷ್ಯಾಣಾಮ್  ಜನಾರ್ದನ 
ನರಕೇ ನಿಯತಮ್  ವಾಸಃ ಭವತಿ ಇತಿ ಅನುಶುಶ್ರುಮ- ಓ ಜನಾರ್ಧನ, ಕುಲ ಧರ್ಮದ ನೆಲೆದಪ್ಪಿದವರಿಗೆ ನರಕವೇ ಮುಗಿಯದ ನೆಲೆ ಎಂದು ಕೇಳಿ ಬಲ್ಲೆವು.

ಇಹದಲ್ಲೂ ನರಕ, ಪರದಲ್ಲೂ ನರಕ, ಹೀಗೆ ಜನ್ಮವೆಲ್ಲಾ ನರಕದಲ್ಲಿ. ಎಂದೆಂದೂ ನರಕದಲ್ಲೇ ಕೊಳೆಯುವ ಪರಿಸ್ಥಿತಿ ಬರುತ್ತದೆ ಎಂದು ತಿಳಿದವರು ಹೇಳುವುದನ್ನು ಕೇಳಿ ತಿಳಿದಿದ್ದೇನೆ. ಹೀಗೆ ಇಹವೂ ನರಕ, ಪರವೂ ನರಕವಾಗಲು ನಾವೇ ಕಾರಣವಾಗುತ್ತೇವೆ.
ಕೃಪೆ ; ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯರು

No comments:

Post a Comment